Breaking News

ಅಪಾರ್ಟ್​ಮೆಂಟ್​ ಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರಗಳ ರಾಶಿ!!

ಬೇಗೂರಿನಲ್ಲಿ ಇರುವ ಅಪಾರ್ಟ್​​ಮೆಂಟ್​​ವೊಂದರಲ್ಲಿ ಒಳಚರಂಡಿಯಲ್ಲಿ ತಲೆಬುರುಡೆ, ಅಸ್ತಿಪಂಜರ, ಮೂಳೆ ಸೇರಿದಂತೆ ಹಲವು ಭಾಗಗಳು ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.ಮೂಳೆಗಳನ್ನು ವಿಶ್ಲೇಷಣೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ, ಈ ಪರೀಕ್ಷೆಗಳ ಫಲಿತಾಂಶಗಳು ಒಂದು ವಾರದೊಳಗೆ ನಿರೀಕ್ಷಿಸಲಾಗಿದೆ ಎಂದು ಬೇಗೂರು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.ಕಳೆದ‌ 10 ವರ್ಷಗಳ ಹಿಂದೆ ಅಪಾರ್ಟ್​​ಮೆಂಟ್ ನಿರ್ಮಾಣವಾಗುವ‌ ಆ ಜಾಗದ ಬಳಿ ಸ್ಮಶಾನವಿತ್ತು ಎಂದು ಸ್ಥಳೀಯರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಹೀಗೆ ಇದ್ದಿರಬಹುದು, ಆದ್ದರಿಂದಲೇ ಇವೆಲ್ಲಾ ಸಿಕ್ಕಿರಬಹುದು ಎಂಬ ವಾದವನ್ನು ಪೊಲೀಸರು ಒಪ್ಪಿಕೊಂಡಿದ್ದರೂ, ಪ್ರಯೋಗಾಲಯದ ವರದಿ ಬಂದ ಬಳಿಕವಷ್ಟೇ ಸ್ಪಷ್ಟತೆ ಸಿಗಲಿದೆ ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎಫ್​ಎಸ್​​ಎಲ್ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *