ಸ್ನೇಹಿತನೊಂದಿಗೆ ಮಾತನಾಡಿದ್ದಕ್ಕೆ ಮಹಿಳೆಯೊಬ್ಬರನ್ನು ಜನರ ಗುಂಪೊಂದು ಸಾರ್ವಜನಿಕವಾಗಿ ನಿಂದಿಸಿದ್ದು, ಇದರಿಂದ ನೊಂದ ಅವರು iಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.ರಸೀನಾ ಮತ್ತು ಆಕೆಯ ಸ್ನೇಹಿತನನ್ನು ಮಸೀದಿಯ ಬಳಿ ಗುಂಪೊಂದು ಪ್ರಶ್ನಿಸಿತು. ಬಳಿಕ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಮೊಬೈಲ್ ಫೋನ್ ಮತ್ತು ಟ್ಯಾಬ್ಲೆಟ್ ಅನ್ನು ಕಸಿದುಕೊಂಡಿದೆ. ಅಲ್ಲದೇ ಮಹಿಳೆಯ ಕುಟುಂಬ ಸದಸ್ಯರನ್ನು ಎಸ್‌ಡಿಪಿಐ ಕಚೇರಿಗೆ ಕರೆಸಿ ಅವಮಾನಿಸಿದೆ ಎಂದು ಆರೋಪಿಸಲಾಗಿದೆ.ತನಗೆ ಆದ ಅವಮಾನದಿಂದ ತೀವ್ರ ನೊಂದಿದ್ದಾಗಿ ಮಹಿಳೆ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳು ಭಾಗಿಯಾಗಿರುವ ಸಾಧ್ಯತೆ ಇದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

