Breaking News

ಮನೆಯಲ್ಲೇ ಹೆರಿಗೆ ಮಾಡಲು ಹೋಗಿ ಸಾವಿಗೀಡಾದ ಯುವತಿ,!!

ಬೆಂಗಳೂರಿನಲ್ಲಿ ಸಾಕಷ್ಟು ಆರೋಗ್ಯ ಸೇವೆ ಇದ್ದರೂ ಅದನ್ನು ಪಡೆಯದೆ, ಮನೆಯಲ್ಲೇ ಹೆರಿಗೆ ಮಾಡಿಸಿಕೊಳ್ಳಲು ಹೋಗಿ ಯುವತಿ ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ನಡೆದಿದೆ. ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ಮನೆಯೊಂದರಲ್ಲಿ ಹೆರಿಗೆಯಾದ ಯುವತಿಯೊಬ್ಬರು ಅಧಿಕ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ.ಯುವತಿ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದು, ಓರ್ವ ಯುವಕನ ಜೊತೆ ಸಂಪರ್ಕದಲ್ಲಿದ್ದರು ಎಂದು ತಿಳಿದುಬಂದಿದೆ. ಗರ್ಭಿಣಿಯಾಗಿದ್ದ ಯುವತಿಗೆ ನಿನ್ನೆ ರಾತ್ರಿ ಏಕಾಏಕಿ ಹೊಟ್ಟೆನೋವು ಕಾಣಿಸಿಕೊಂಡಿದೆ. ಹೆರಿಗೆಯ ಬಳಿಕ ಆಕೆಗೆ ವಿಪರೀತ ರಕ್ತಸ್ರಾವ ಆಗಿದ್ದು, ದುರಂತಕ್ಕೆ ಕಾರಣವಾಯಿತು. ಬೆಳಗಿನ ಜಾವ 3 ಗಂಟೆ ಸುಮಾರಿಗೆ, ರೂಮಿನಿಂದ ಅಸಹಜ ಶಬ್ದ ಕೇಳಿ ಬಂದಾಗ, ಮನೆಯಲ್ಲಿದ್ದ ಸಂಬಂಧಿಯೊಬ್ಬರು ರೂಮಿಗೆ ಧಾವಿಸಿದ್ದಾರೆ. ಅಲ್ಲಿ ಗರ್ಭಿಣಿ ರಕ್ತಸ್ರಾವದಿಂದ ಬಳಲುತ್ತಿರುವುದನ್ನು ಕಂಡು ಆಘಾತಗೊಂಡಿದ್ದಾರೆ

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *