ಗ್ರಾಮದ ರೂಪಾ ಎಂಬ ವಿದ್ಯಾರ್ಥಿನಿಗೆ ಬಸ್ ಗುದ್ದಿದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯಾರ್ಥಿನಿ 20 ಮೀಟರ್ ದೂರಕ್ಕೆ ಹಾರಿ ಬಿದ್ದಿದ್ದಾಳೆ. ಗ್ರಾಮಸ್ಥರು ಕೂಗಿಕೊಂಡು ತಕ್ಷಣ ಬಸ್ ಚಾಲಕ ಪರಾರಿಯಾಗಿದ್ದಾನೆ. ಆಕೆ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ. ಚಾಲಕನನ್ನು ಬಂಧಿಸಬೇಕು. ಅಲ್ಲದೆ, ಗ್ರಾಮದ ಮುಖ್ಯ ರಸ್ತೆಯಲ್ಲಿ ರಸ್ತೆ ಉಬ್ಬು ನಿರ್ಮಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.ಪಿಎಸ್‌ಐ ಕರಿಬಸಪ್ಪ ಸ್ಥಳಕ್ಕೆ ಭೇಟಿ ನೀಡಿ, ಗ್ರಾಮಸ್ಥರನ್ನು ಮನವೊಲಿಸಿ ಪ್ರತಿಭಟನೆ ಕೈಬಿಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

