Breaking News

ಆನೇಕಲ್ : ಯುವತಿಗೆ ಹಾಡಹಗಲೇ ಲೈಂಗಿಕ ಕಿರುಕುಳ!!

ದಿನಸಿ ತರಲೆಂದು ಯುವತಿ ಅಂಗಡಿಗೆ ತೆರಳುತ್ತಿದ್ದ ವೇಳೆ ಗಾಂಜಾ ನಶೆಯಲ್ಲಿದ್ದ ಕಿರಾತಕರು ಆಕೆಯನ್ನು ಅಡ್ಡಗಟ್ಟಿ ಮೈಕೈ ಮುಟ್ಟಿ ಎಳೆದಾಡಿದ್ದಾರೆ. ಯುವತಿ ಪ್ರತಿರೋಧ ತೋರಿದ್ದಕ್ಕೆ ನಡುರಸ್ತೆಯಲ್ಲೇ ಹಲ್ಲೆ ಕೂಡ ಮಾಡಿದ್ದಾರೆ. ಹೇಗೋ ಆಕೆ ಸ್ಥಳೀಯರ ನೆರವಿನಿಂದ ತಪ್ಪಿಸಿಕೊಂಡಿದ್ದಾಳೆ. ಈ ವೇಳೆ ಸ್ಥಳೀಯರ ಮೇಲೂ ಹಲ್ಲೆ ನಡೆಸಿದ ಕಿಡಿಗೇಡಿಗಳು ಯುವತಿಯ ಮನೆಗೆ ನುಗ್ಗಿ ಹಲ್ಲೆ ನಡೆಸಲು ಯತ್ನಿಸಿದ್ದಾರೆ.ಮಹಿಳೆ ಮತ್ತು ಸ್ಥಳೀಯರ ಮೇಲಿನ ಹಲ್ಲೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿ. ಈ ಸಂಬಂಧ ಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *