Breaking News

ಹಿರಿಯೂರ: ಮುರಿದು ಬಿದ್ದ ವಿವಾಹ, ಮದುವೆಯೇ ಬೇಡವೆಂದ ವಧು!

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ಯುವತಿ ಹಾಗೂ ಜಗಳೂರು ಪಟ್ಟಣದ ಯುವಕನ ವಿವಾಹ ನಿಶ್ಚಯವಾಗಿತ್ತು.ವರನ ಕಡೆಯ ಕೆಲವರಿಗೆ ಕುಡಿಯುವ ನೀರು ಸಿಕ್ಕಿಲ್ಲ. ಇದೇ ವಿಚಾರಕ್ಕೆ ವಧು ಹಾಗೂ ವರನ ಕಡೆಯವರ ನಡುವೆ ಜಗಳ ನಡೆದಿದೆ. ನೀರಿನ ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ಮದುವೆಯೇ ನಿಲ್ಲುವ ಸೂಚನೆ ಕಂಡು ಬಂದಿದೆ.ಜಗಳ ಮರೆತು ಹಸೆಮಣೆ ಎರುವಂತೆ, ವಧು-ವರರ ಪೋಷಕರು ಹಾಗೂ ಸಂಬಂಧಿಕರು ಮನವೊಲಿಸುವ ಯತ್ನ ಮಾಡಿದರೂ ಪ್ರಯೋಜನವಾಗಿಲ್ಲ. ಭಾನುವಾರ ಮಧ್ಯಾಹ್ನ 12 ಗಂಟೆವರೆಗೂ ಸಂಧಾನ ನಡೆಯಿತಾದರೂ, ವಧು ಒಪ್ಪದ ಕಾರಣ ಮದುವೆ ಮುರಿದು ಬಿದ್ದಿತು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *