Breaking News

ಮಹಾನಗರ ಪಾಲಿಕೆ : ನಿವೃತ್ತನಾಗಿ 15 ವರ್ಷ ಕಳೆದರೂ ಕುರ್ಚಿ ಬಿಡದ ಅಧಿಕಾರಿ!!

ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕ ಡಾ.ಗಾನ ಪಿ ಕುಮಾರ್, ಸುರೇಶ್ ಕುಮಾರ್ ಪಿ ಮತ್ತು ಪೊಲೀಸ್ ನಿರೀಕ್ಷಕಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಮತ್ತು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ, ರಾಜೇಂದ್ರ ನಾಯ್ಕ್ ಎಂ.ಎನ್ ರವರು ಮಂಗಳೂರು ಮತ್ತು ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬಂದಿಗಳೊಂದಿಗೆ ಮಂಗಳೂರು ಮಹಾನಗರ ಪಾಲಿಕೆಗೆ ಲೋಕಾಯುಕ್ತರಿಂದ ಸರ್ಚ್ ವಾರಂಟ್ ಪಡೆದು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಂಗಳೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗ, ಆರೋಗ್ಯ ವಿಭಾಗ, ಎಂಜಿನಿಯರ್ ವಿಭಾಗ, ಲೆಕ್ಕ ಪತ್ರ ವಿಭಾಗ. ನಗರ ಯೋಜನಾ ವಿಭಾಗ, ಆಯುಕ್ತರ ಕಚೇರಿಯಲ್ಲಿ ಕಡತ ವಿಲೇವಾರಿಯಲ್ಲಿಭಾರೀ ನ್ಯೂನತೆಗಳು ಕಂಡುಬಂದಿವೆ.ಬ್ರೋಕರ್ ಒಬ್ಬರ ಬಳಿ ರೂ 5 ಲಕ್ಷ ಹಣ ಪತ್ತೆಯಾಗಿದ್ದು, ಆರೋಗ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಅಧಿಕಾರಿಯೊಬ್ಬರು ನಿವೃತ್ತರಾಗಿ 15 ವರ್ಷ ಕಳೆದರು ಕೂಡ ಇಲ್ಲಿಯವರೆಗೆ ಅದೇ ಹುದ್ದೆಯಲ್ಲಿ ಮುಂದುವರೆದಿವುದು ಭಾರೀ ಅಚ್ಚರಿ ಮತ್ತು ಆತಂಕಕ್ಕೆ ಕಾರಣವಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *