ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬಿಬಿಎಂಪಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಕಾಶ್ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.ಕಚೇರಿ, ನಿವಾಸ ಸೇರಿದಂತೆ ನಗರದ ಒಟ್ಟು ಐದು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗೋವಿಂದರಾಜನಗರ ವಿಭಾಗದ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಕಾಶ್, ನಾಗರಬಾವಿ, ಗೋವಿಂದರಾಜನಗರ, ಯಲಹಂಕ ಭಾಗದಲ್ಲಿ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

