Breaking News

ಧಾರವಾಡ : ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಗದಗ, ಧಾರವಾಡ, ಕಲಬುರಗಿ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಧಾರವಾಡ ಜಿಲ್ಲೆಯಲ್ಲೂ ಲೋಕಾಯುಕ್ತ ದಾಳಿ ನಡೆದಿದೆ. ಮಲಪ್ರಭಾ ಪ್ರಾಜೆಕ್ಟ್‌ನ ಇಂಜಿನಿಯರ್ ಅಶೋಕ್ ವಲ್ಸಂದ ಅವರ ಮನೆ ಮೇಲೂ ಲೋಕಾ ದಾಳಿ ಮಾಡಲಾಗಿದೆ. ಧಾರವಾಡ ನಗರದ ಕೆವಿಜಿ ಬ್ಯಾಂಕ್ ಬಳಿಯಿರುವ ಕ್ವಾಟರ್ಸ್ ಸೇರಿ ಇಂಜಿನಿಯರ್ ಕಚೇರಿ ಮೇಲೂ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು ವಿವಿಧ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *