ಕಾರುಗಳ ಓವರ್ ಟೆಕ್ ವಿಚಾರದಲ್ಲಿ ಗಲಾಟೆಯಾಗಿ ಕಾರಿನಲ್ಲಿದ್ದ ಮುಸ್ಲಿಂ ವ್ಯಕ್ತಿಗಳಿಗೆ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಬೆಂಬಲಿಗರು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದ್ದು, ಇದೀಗ ಅನಂತ್ ಕುಮಾರ್ ಹೆಗಡೆ ಗನ್ ಮ್ಯಾನ್ ಹಾಗೂ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ಅನಂತ್ ಕುಮಾರ್ ಹೆಗಡೆ ಅವರು ತೆರಳುತ್ತಿದ್ದ ಕಾರನ್ನು, ಓವರ್ ಟೇಕ್ ಮಾಡಲಾಯಿತು ಎಂಬ ಕಾರಣಕ್ಕೆ ಇನ್ನೋವಾ ಕಾರಿನಲ್ಲಿದ್ದ ನಾಲ್ವರ ಮೇಲೆ, ಅನಂತ್ ಕುಮಾರ್ ಹೆಗಡೆ ಪುತ್ರ ಅಶುತೋಷ್, ಚಾಲಕ ಹಾಗೂ ಗನ್ಮ್ಯಾನ್ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಸೋಂಪುರ ಹೋಬಳಿಯ ಹಾಲೇನಹಳ್ಳಿ ಗ್ರಾಮದ ಸಲ್ಮಾನ್ ಖಾನ್(30), ಸೈಫ್ ಖಾನ್(28) ಇಲಿಯಾಸ್ ಖಾನ್(50), ಗುಲ್ ಷಿರಾ ಉನ್ನೀಸಾ(45) ಎಂಬವರ ಮೇಲೆ ಹಲ್ಲೆ ನಡೆದಿದ್ದು, ಅವರಿಗೆ ದಾಬಸ್ಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

