Breaking News

ಹಾವೇರಿ: ಬ್ಯಾನರ್‌ ತೆರವು ಗಲಾಟೆ, ನಗರಸಭೆ ಸಿಬ್ಬಂದಿ ರಂಗಪ್ಪ ಹರೆಕಲ್ಲ ಸಾವಿನಲ್ಲಿ ಅಂತ್ಯ!

ಹಾವೇರಿ ನಗರಸಭೆಯಲ್ಲಿ ಬರ್ತಡೇ ಬ್ಯಾನರ್ ತೆರವಿಗೆ ನಡೆದ ಗಲಾಟೆಯಲ್ಲಿ ನಿಂದನೆಯಿಂದ ಖಿನ್ನಗೊಂಡು ರಂಗಪ್ಪ ಹೆರಕಲ್ಲ ವಿಷ ಸೇವಿಸಿ ಸಾವನ್ನಪ್ಪಿದ ದುಃಖದ ಘಟನೆ ನಡೆದಿದೆ. ಸಂಬಂಧಿಸಿದವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕುಟುಂಬದವರು ಆಗ್ರಹಿಸಿದ್ದಾರೆ.ವಿಷ ಸೇವನೆ ಮಾಡಿದ್ದ ರಂಗಪ್ಪನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದರೂ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳನ್ನ ಗಡಿಪಾರು ಮಾಡುವಂತೆ ಕುಟುಂಬ ಸದಸ್ಯರು ಆಗ್ರಹ ಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ರಂಗಪ್ಪನ ಕುಟುಂಬ ಸದಸ್ಯರು ನಗರಸಭೆಯ ಮುಂದೆ ಶವವಿಟ್ಟು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *