ಕಳೆದ ವಾರ ವೃದ್ಧ ದಂಪತಿಯನ್ನು ಅವರ ಮಗನೇ ಬಂದು ಖಾಸಗಿ ವೃದ್ದಾಶ್ರಮಕ್ಕೆ ಸೇರಿಸಿ ಹೋಗಿದ್ದನು. ಆದರೆ, ಮಂಗಳವಾರ ರಾತ್ರಿ ದಂಪತಿ ಅವರ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬುಧವಾರ ಬೆಳಗ್ಗೆ ಕೋಣೆಯ ಬಾಗಿಲು ತೆರೆಯದ ಕಾರಣ ಶಂಕೆಗೊಂಡ ಆಶ್ರಮ ಸಿಬ್ಬಂದಿ ಬಾಗಿಲು ತೆರೆಯಲು ಯತ್ನಿಸಿದ್ದಾರೆ. ಬಳಿಕ ಸ್ಥಳೀಯ ಪೊಲೀಸರ ನೆರವಿನಿಂದ ಬಾಗಿಲು ತೆರೆಯಲಾಗಿದ್ದು, ದಂಪತಿಯ ಶವ ಪತ್ತೆಯಾಗಿದೆ.ಕುಟುಂಬದಲ್ಲಿ ತೊಂದರೆಗಳನ್ನು ಅನುಭವಿಸುತ್ತಿದ್ದರಿಂದ ಮನನೊಂದು ದಂಪತಿಯ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

