Breaking News

ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಿಸಿದ್ದಕ್ಕೆ ಶಾಲೆ ತೊರೆದ ಮಕ್ಕಳೂರಿಗೆ ಅಧಿಕಾರಿಗಳು!

ಸರ್ಕಾರಿ ಶಾಲೆಯಲ್ಲಿ ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ ಬುಧವಾರ ಶಾಲೆಗೆ ಪೊಲೀಸ್‌ ವರಿಷ್ಠಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪೋಷಕರೊಂದಿಗೆ ಸಂಧಾನ ಸಭೆ ನಡೆಸಿದ್ದಾರೆ.ಸಭೆಯಲ್ಲಿ ಡಿಡಿಪಿಐ ರಾಮಚಂದ್ರೇ ಅರಸ್ ಮಾತನಾಡಿ, ನಿಮ್ಮ ಸಮಸ್ಯೆಗಳಿಗೆ ಜಿಲ್ಲಾಡಳಿತ ಸ್ಪಂದಿಸಲಿದೆ. ಶಾಲೆಯಲ್ಲಿ ಶಿಕ್ಷಕರಿಂದ ತಪ್ಪು ನಡೆದಿದ್ದರೆ ಅವರ ವಿರುದ್ಧ ಶಿಸ್ತು ಕ್ರಮವಾಗುತ್ತದೆ. 21 ಮಕ್ಕಳನ್ನು ಶಾಲೆಗೆ ದಾಖಲು ಮಾಡಿದರೆ, ಮತ್ತೊಬ್ಬ ಅಡುಗೆ ಸಿಬ್ಬಂದಿಯನ್ನು ನೇಮಕ ಮಾಡಲಾಗುತ್ತದೆ. ಈಗ ಇಬ್ಬರು ಬೇರೆ ಶಿಕ್ಷಕರನ್ನು ನಿಯೋಜನೆ ಮಾಡಿದ್ದು, ಮತ್ತೊಬ್ಬರು ಅತಿಥಿ ಶಿಕ್ಷಕರನ್ನು ನೇಮಿಸಲಾಗುತ್ತದೆ. ಶಾಲೆ ಬಿಟ್ಟು ಹೋಗಿರುವ ಎಲ್ಲಾ ಮಕ್ಕಳನ್ನು ಮತ್ತೇ ಶಾಲೆಗೆ ಸೇರಿಸಲು ಪೋಷಕರು ಮುಂದಾಗಬೇಕು. ಮುಂದಿನ ವರ್ಷಕ್ಕೆ ಶತಮಾನ ಪೊರೈಸಿರುವ ಸರ್ಕಾರಿ ಶಾಲೆಗೆ ಸರ್ಕಾರ ₹10 ಲಕ್ಷ ಅನುದಾನ ನೀಡುತ್ತದೆ. ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತದೆ ಎಂದು ತಿಳಿಸಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *