Breaking News

ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಮನೆ ಕಟ್ಟಬೇಡಿ: ಡಿ.ಕೆ. ಶಿವಕುಮಾರ್ ಹೇಳಿಕೆ.

ಕಟ್ಟಡ ನಕ್ಷೆ ಮಂಜೂರು, ಸ್ವಾಧೀನ ಪ್ರಮಾಣಪತ್ರ ಇಲ್ಲದೆ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಹೀಗಾಗಿ, ಅನುಮತಿ ಇಲ್ಲದೆ ಜನರು ಮನೆ ಕಟ್ಟಬಾರದು’ ಎಂದು ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಅಕ್ರಮ-ಸಕ್ರಮ ಮಸೂದೆ ತರಬಹುದಲ್ಲವೇ ಎಂದು ಕೇಳಿದಾಗ, ‘ಸುಪ್ರೀಂ ಕೋರ್ಟ್ ಈಗಾಗಲೇ ಇದಕ್ಕೆ ತಡೆ ನೀಡಿದೆ. ನಮ್ಮ ಸರ್ಕಾರ ‘ಎ’ ಖಾತಾ, ‘ಬಿ’ ಖಾತಾ ಸಮಸ್ಯೆ ಬಗೆಹರಿಸಲು ಯತ್ನಿಸುತ್ತಿದೆ. ನಾವು 110 ಹಳ್ಳಿಗಳಿಗೆ ನೀರಿನ ಸಂಪರ್ಕ ನೀಡಲು ಮುಂದಾಗಿದ್ದೆವು. ಈ ತೀರ್ಪಿನ ನಂತರ ಜಲಮಂಡಳಿಗೆ ತೊಂದರೆಯಾಗಿದೆ. ಕಳೆದ ವರ್ಷ ಜೂನ್‌ ತಿಂಗಳಲ್ಲಿ 39 ಸಾವಿರ ನೀರಿನ ಸಂಪರ್ಕ ನೀಡಿದ್ದೆವು. ಈ ವರ್ಷ ಕೇವಲ 300 ಸಂಪರ್ಕ ನೀಡಿದ್ದೇವೆ’ ಎಂದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *