ಕೃಷಿ ಇಲಾಖೆ ವತಿಯಿಂದ ಕ್ಷೇತ್ರದಲ್ಲಿ ಯಂತ್ರೋಪಕರಣಗಳ ಬಳಕೆ ಅಧಿಕ ಮಾಡುವ ನಿಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ ಆಧುನಿಕ ತಂತ್ರಜ್ಞಾನದ ಬೃಹತ್ ಯಂತ್ರಗಳನ್ನು ಅಳವಡಿಸಿಕೊಂಡು, ಸಕಾಲದಲ್ಲಿ ಕೃಷಿ ಕಾರ್ಯಗಳನ್ನು ನೆರವೇರಿಸಲು ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ (ಕಟಾವು ಕೇಂದ್ರಗಳು) ಸ್ಥಾಪನೆಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಎಂ. ಸೋಮಸುಂದರ ತಿಳಿಸಿದ್ದಾರೆ.ಆರು ಅಥವಾ ಒಂಬತ್ತು ವರ್ಷಗಳ ಕಾಲ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು ತಪಾಸಣೆಯಲ್ಲಿ ಸಂಪೂರ್ಣವಾಗಿ ಲೆಕ್ಕ-ಪತ್ರ ಹಾಗೂ ಯಂತ್ರೋಪಕರಣಗಳನ್ನು ಹಾಜರುಪಡಿಸಿರುವ ಕೃಷಿ ಯಂತ್ರಧಾರೆ ಕೇಂದ್ರಗಳ ಸೇವಾದಾರ ಸಂಸ್ಥೆಗಳು ಮಾತ್ರ ಅರ್ಜಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಅಥವಾ ದೂ.08392-276224 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

