Breaking News

ಹುಬ್ಬಳ್ಳಿ-ಸೊಲ್ಲಾಪುರಕ್ಕೆ ಇನ್ನು ಮುಂದೆ ಚತುಷ್ಪಥ ರಸ್ತೆ..!

ಹುಬ್ಬಳ್ಳಿ-ಸೊಲ್ಲಾಪುರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥವಾಗಿ ವಿಸ್ತರಿಸಲು ಕೇಂದ್ರ ಸರ್ಕಾರ ಮನಸ್ಸು ಮಾಡಿದೆ. ಈ ಮೂಲಕ ಸಂಚಾರ ದಟ್ಟಣೆಯ ಸಮಸ್ಯೆಗೆ ಪರಿಹಾರ ಸಿಗುವ ಭರವಸೆ ಮೂಡಿದೆ.
ಈ ಕುರಿತಾಗಿ ಶೀಘ್ರದಲ್ಲಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ಸಿದ್ಧಪಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾರ್ಯದರ್ಶಿಗಳ ನೇತೃತ್ವದಲ್ಲಿ ಜರುಗಿದ ೨೦೨೫-೨೬ನೇ ಸಾಲಿನ ಕಾರ್ಯಯೋಜನಾ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ೨೦೨೮ರೊಳಗಾಗಿ ಚತುಷ್ಪಥ ರಸ್ತೆಯನ್ನು ವಿಸ್ತರಿಸುವ ಕಾಮಗಾರಿಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
ಹುಬ್ಬಳ್ಳಿ-ಸೊಲ್ಲಾಪುರ ೨೯೬ ಕಿ.ಮೀ. ಅಂತರವಿದ್ದು, ವಿಜಯಪುರದಿಂದ- ಹುಬ್ಬಳ್ಳಿ ವರೆಗೆ ೧೮೬ ಕಿ.ಮೀ. ಆಗಲಿದೆ. ವಿಜಯಪುರದಿಂದ ಹುಬ್ಬಳ್ಳಿವರೆಗೂ ರಸ್ತೆಯನ್ನು ಚತುಷ್ಪಥವನ್ನಾಗಿಸಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಡಿಪಿಆರ್ ಸಿದ್ಧಪಡಿಸಲು ಸದ್ಯದಲ್ಲೇ ಟೆಂಡರ್ ಕರೆಯಲಾಗುತ್ತದೆ. ಡಿಪಿಆರ್ ಸಿದ್ಧಗೊಂಡ ನಂತರ ಕಾಮಗಾರಿಗೆ ಚಾಲನೆ ಸಿಗಲಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *