Breaking News

ಕೊಲೆಗೆ ಮೊದಲು ಸೊಸೆಯ ಮೇಲೆ ಅತ್ಯಾಚಾರ ಎಸಗಿದ್ದ ಮಾವ!

ಫರಿದಾಬಾದ್‌ನಲ್ಲಿ ವರದಕ್ಷಿಣೆಗಾಗಿ ನಡೆದ ತನು ಎಂಬ ಯುವತಿಯ ಕೊಲೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಆಕೆಯ ಮಾವ ಕೊಲೆಯ ಮೊದಲು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಅರುಣ್ ನಿದ್ರೆ ಮಾತ್ರೆಯನ್ನು ಹಾಕಿ ಕೊಟ್ಟಿದ್ದರಿಂದ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಳು. ಭೂಪ್ ಸಿಂಗ್ ತನ್ನ ಸೊಸೆಯನ್ನು ಕೊಲೆ ಮಾಡುವ ಮೊದಲು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಆದರೆ, ಆತ ಅತ್ಯಾಚಾರದ ಬಗ್ಗೆ ತನ್ನ ಮಗ ಮತ್ತು ಪತ್ನಿಗೆ ತಿಳಿಸಿರಲಿಲ್ಲ. ಅತ್ಯಾಚಾರ ಕೊಲೆ ಬಳಿಕ ಅರುಣ್ ಜೊತೆ ಸೇರಿ ರಸ್ತೆಯಲ್ಲಿ ಮೊದಲೇ ಅಗೆದಿದ್ದ ಗುಂಡಿಯಲ್ಲಿ ಮೃತದೇಹವನ್ನು ಹೂತು ಹಾಕಿದ್ದ.ಪ್ರಕರಣಕ್ಕೆ ಸಂಬಂಧಿಸಿ ಭೂಪ್ ಸಿಂಗ್, ಪತ್ನಿ ಸೋನಿಯಾ ಮಗ ಅರುಣ್ ಸಿಂಗ್ ಮತ್ತು ಮಗಳು ಕಾಜಲ್ ವಿರುದ್ಧ ಪಲ್ಲಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *