Breaking News

ಶಿವಮೊಗ್ಗ :ವಿದ್ಯುತ್ ಸ್ಪರ್ಶಿಸಿ ಪತ್ನಿ, ಕಾಪಾಡಲು ಹೋದ‌ ಪತಿಯು ಸಾವು!

ಮನೆ ಮುಂದೆ ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಗೆ ಮನೆಯ ವಿದ್ಯುತ್ ಮೋಟಾರ್‌ನ ವೈರ್‌ಗಳು ಸಂಪರ್ಕವಾಗಿದ್ದು, ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದ ತಂತಿ ತೇವಗೊಂಡಿದೆ. ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದ ವಿನೋದ ಅವರಿಗೆ ವಿದ್ಯುತ್ ತಗುಲಿದ್ದು, ಅವರನ್ನು ರಕ್ಷಿಸಲು ಧಾವಿಸಿದ ಪತಿ ಕೃಷ್ಣಪ್ಪ ಅವರಿಗೂ ಶಾಕ್ ಹೊಡೆದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಸೊರಬ ಪೊಲೀಸ್ ಠಾಣೆಯ ಪಿಎಸ್‌ಐ ನವೀನ್ ಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣುಮಕ್ಕಳು ಹಾಗೂ ಒಬ್ಬ ಪುತ್ರ‌ನಿದ್ದಾನೆ ಎಂದು ತಿಳಿದುಬಂದಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *