Breaking News

ಈ ಬಾರಿ 11 ದಿನಗಳ ಕಾಲ ದಸರಾ ಹಬ್ಬ ಆಚರಣೆಗೆ ನಿರ್ಧಾರ : CM ಸಿದ್ದರಾಮಯ್ಯ ಹೇಳಿಕೆ!

ಈ ಬಾರಿ ದಸರಾ ಹಬ್ಬವನ್ನು 11 ದಿನಗಳ ಕಾಲ ಆಚರಿಸಲು ನಿರ್ಧರಿಸಲಾಗಿದೆ ಎಂದು ದಸರಾ ಪೂರ್ವಭಾವಿ ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬೆಂಗಳೂರಿನ ವಿಧಾನಸೌಧದಲ್ಲಿ ದಸರಾ ಪೂರ್ವಭಾವಿ ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ದಸರಾ ವೀಕ್ಷಣೆಗೆ 10 ಲಕ್ಷಕ್ಕೂ ಹೆಚ್ಚು ಜನರು ಬರುವ ನಿರೀಕ್ಷೆ ಇದೆ. ಹಾಗಾಗಿ ನೂಕು ನುಗ್ಗುಲು ಆಗದಂತೆ ನೋಡಿಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಜನಸ್ನೇಹಿಗಳಾಗಿ ಪೊಲೀಸರು ವರ್ಜಿಸಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇನೆ. ವಸ್ತು ಪ್ರದರ್ಶನದ ಮಳಿಗೆ ಆರಂಭದ ದಿನವೇ ತುಂಬಬೇಕು. ಕಳೆದ ಬಾರಿ ಮೈಸೂರು ದಸರಾ ಗೆ 40 ಕೋಟಿ ರೂಪಾಯಿ ಖರ್ಚಾಗಿತ್ತು. ಯಾವುದೇ ಬಿಲ್ ಗಳು ಪೆಂಡಿಂಗ್ ಇಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *