ಪುತ್ತೂರಿನ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ(21) ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದ್ದು, ಮಂಗಳೂರಿನ ಖಾಸಗಿ ಕಾಲೇಜಿನ ಬಿ.ಎಸ್ಸಿ ಫಾರೆನ್ಸಿಕ್ ಸೈನ್ಸ್ ವಿದ್ಯಾರ್ಥಿನಿ ದೂರು ನೀಡಿದ್ದಾರೆ. ಪುತ್ತೂರಿನಲ್ಲಿ ಹೈಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಪ್ರೇಮಾಂಕುರವಾಗಿತ್ತು. ಬಳಿಕ 2024ರ ಅಕ್ಟೋಬರ್ 11ರಂದು ಶ್ರೀಕೃಷ್ಣ ಮನೆಗೆ ಕರೆದು ದೈಹಿಕ ಸಂಪರ್ಕ ಬೆಳೆಸಿದ ಆರೋಪ ಮಾಡಿದ್ದಾರೆ.ಮನೆಯಲ್ಲಿ ಯಾರೂ ಇಲ್ಲದ ವೇಳೆ ಮದುವೆಯಾಗುತ್ತೇನೆ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದಾನೆ. ಅದಾದ ಬಳಿಕ 2025ರ ಜನವರಿ ತಿಂಗಳಿನಲ್ಲಿ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿದ್ದ. ಆ ಬಳಿಕ ಯುವತಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು.ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣ ಎಸ್ಕೇಪ್ ಆಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

