Breaking News

ಸರ್ಕಾರಿ ನೌಕರಿಗೆ ನಕಲಿ ಅಂಕಪಟ್ಟಿ ಸಲ್ಲಿಕೆ ಪ್ರಕರಣ, ಇಬ್ಬರಿಗೆ ಜೈಲು!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹಿಂಬಾಕಿ ಅಟೆಂಡರ್ ಹುದ್ದೆಗೆ ಖೊಟ್ಟಿ ಅಂಕಪಟ್ಟಿ ಸಲ್ಲಿಸಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಎರಡೂವರೆ ವರ್ಷ ಜೈಲು ಶಿಕ್ಷೆ ಹಾಗೂ ತಲಾ ನಾಲ್ಕು ಸಾವಿರ ರೂ. ದಂಡ ವಿಧಿಸಿ ವಿಜಯಪುರದ ಪ್ರಧಾನ ಸಿಜೆಎಂ ನ್ಯಾಯಾಲಯ ಆದೇಶಿಸಿದೆ.ಈ ಪ್ರಕರಣದ ವಿಚಾರಣೆ ನಡೆಸಿರುವ ಪ್ರಧಾನ ಸಿಜೆಎಂ ನ್ಯಾಯಾಲಯದ ನ್ಯಾ.ಮಲ್ಲಿಕಾರ್ಜುನ ಅಂಬಲಿ ಅವರು ಇಬ್ಬರು ಆರೋಪಿಗಳಿಗೆ ಐಪಿಸಿ ಕಲಂ 468, 471 ಮತ್ತು 420ರಡಿ ಈ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಅಭಿಯೋಜಕ ಎಲ್.ಎಂ.ಹಳ್ಳೂರ ವಾದ ಮಂಡಿಸಿದ್ದರು

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *