ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಸೋಮೇಶ್ವರ ಬೀಚ್ ಗೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಜಾಲತಾಣದಲ್ಲಿ ಪರಿಚಯಿಸಿಕೊಂಡಿದ್ದ ಆರೋಪಿ 5 ದಿನದಲ್ಲೇ ಭೇಟಿಯಾಗಲು ಉಳ್ಳಾಲದ ಮನೆಗೆ ಕಾರ್ ನಲ್ಲಿ ಕರೆದೊಯ್ದಿದ್ದ.ನಂತರ ಆಕೆಯನ್ನು ಕುತ್ತಾರು ಸಮೀಪದ ಲಾಡ್ಜ್ ಗೆ ಕರೆದುಕೊಂಡು ಹೋಗಿ ರೂಂ ಕೇಳಿದ್ದಾನೆ. ಆದರೆ, ಬಾಲಕಿಯಾಗಿದ್ದ ಕಾರಣ ಲಾಡ್ಜ್ ಸಿಬ್ಬಂದಿ ರೂಂಮ್ ನೀಡಿರಲಿಲ್ಲ. ನಂತರ ಸೋಮೇಶ್ವರ ಕಡಲ ತೀರಕ್ಕೆ ಕರೆದೊಯ್ದು ಕಾರ್ ನಲ್ಲಿ ಅತ್ಯಾಚಾರ ಎಸಗಿದ್ದಾನೆ.ಅಡ್ಯಾರ್ ವಳಚ್ಚಿಲ್ ನಿವಾಸಿ ಪೇಂಟಿಂಗ್ ವೃತ್ತಿ ಮಾಡಿಕೊಂಡಿರುವ ಕೆಲ್ವಿನ್(24) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

