ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪ್ರಿಯಕರನ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿದ್ದಾಳೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಾಡುಶೆಟ್ಟಿ ಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 50 ವರ್ಷದ ಶಂಕರಮೂರ್ತಿ ಎಂಬುವವರನ್ನು ಅವರ ಪತ್ನಿ ಸುಮಂಗಳಾ ಮತ್ತು ಆಕೆಯ ಪ್ರಿಯಕರ ನಾಗರಾಜು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.ಸುಮಂಗಳಾ ಮತ್ತು ನಾಗರಾಜು ಒಟ್ಟಾಗಿ ಶಂಕರಮೂರ್ತಿಯ ಕಣ್ಣಿಗೆ ಖಾರದ ಪುಡಿ ಎರಚಿ, ದೊಣ್ಣೆಯಿಂದ ಹೊಡೆದು, ಕೊನೆಗೆ ಕುತ್ತಿಗೆ ಮೇಲೆ ಕಾಲಿಟ್ಟು ಭೀಕರವಾಗಿ ಕೊಂದಿದ್ದಾರೆ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

