Breaking News

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮಾಕಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.ಬೆಳಗ್ಗೆ ದೇವಸ್ಥಾನಕ್ಕೆಂದು ಇನ್ನೋವಾ ಕಾರಿನಲ್ಲಿ 8 ಮಂದಿ ಬಂದಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ನಾಲ್ವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ದೊಡ್ಡಬಳ್ಳಾಪುರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *