ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಕಂಡು ಬಂದಿರುವ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಹಿತ ಮೂವರು ಅಧಿಕಾರಿಗಳಿಗೆ ಕಡ್ಡಾಯ ರಜೆಯಲ್ಲಿ ತೆರಳಲು ಅರಣ್ಯ ಇಲಾಖೆ ಆದೇಶಿಸಿದೆ.ಹುಲಿಗಳ ಸಾವು ನಡೆದ ಘಟನಾ ಸ್ಥಳದಿಂದ 800 ಮೀಟರ್ ಅಂತರದಲ್ಲಿ ಕಳ್ಳ ಬೇಟೆ ತಡೆ ಶಿಬಿರವಿದ್ದು, ಮುಖ್ಯ ಸಂಚಾರ ರಸ್ತೆಯಿಂದ 100 ಮೀಟರ್ ಹಂತರದಲ್ಲಿ ಹುಲಿಗಳು ಸಾವನ್ನಪ್ಪಿರುವುದು ಹಾಗೂ ಕಳೆದ ಮೂರು ತಿಂಗಳಿಂದ ಹೊರ ಗುತ್ತಿಗೆ ನೌಕರರಿಗೆ ವೇತನ ಪಾವತಿಯಾಗದೇ ಇರುವುದು ಗಮನಿಸಿದರೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಹನೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಹೂಗ್ಯಂ ವಲಯ ಅರಣ್ಯಾಧಿಕಾರಿಗಳು ಕರ್ತವ್ಯ ಲೋಪ ಎಸಗಿರುವ ಬಗ್ಗೆ ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನಲೆಯಲ್ಲಿ ಮೂವರು ಅಧಿಕಾರಿಗಳಿಗೆ ಮುಂದಿನ ಆದೇಶತನಕ ಕಡ್ಡಾಯ ರಜೆ ಮೇಲೆ ತೆರಳಲು ಆದೇಶಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

