Breaking News

ನೆಲದಲ್ಲಿ ಡ್ರಗ್ಸ್ ಹೂತಿಟ್ಟು ಲೊಕೇಶನ್ ಕಳಿಸುವ ಪೆಡ್ಲರ್ – ತಗ್ಲಾಕ್ಕೊಂಡ ವ್ಯಸನಿ!

ಸೋಲದೇವನಹಳ್ಳಿ ಹಾಗೂ ಮಾದನಾಯಕನಹಳ್ಳಿ ವ್ಯಾಪ್ತಿಯಲ್ಲಿ ಡ್ರಗ್ಸ್ ದಂಧೆ ಹೆಚ್ಚಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಇದರ ನಡುವೆಯೇ ರಸ್ತೆ ಬದಿ ಡ್ರಗ್ಸ್ ಗಾಗಿ ಹುಡುಕಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ಮೊಬೈಲ್ ಪರಿಶೀಲನೆ ನಡೆಸಿದಾಗ, ನೈಜೀರಿಯಾ ಮೂಲದ ಪ್ರಜೆಯೋರ್ವ 1500 ರೂಪಾಯಿಗೆ ಡ್ರಗ್ಸ್ ಅನ್ನು ಬಚ್ಚಿಟ್ಟು ಈತನಿಗೆ ತೆಗೆದುಕೊಳ್ಳುವಂತೆ ಹೇಳಿದ್ದ ಎಂದು ಗೊತ್ತಾಗಿದೆ.ಡ್ರಗ್ಸ್ ಇರುವ ಸ್ಥಳದ ಫೋಟೋ ಹಾಗೂ ಲೊಕೇಶನ್ ಆಧರಿಸಿ ವ್ಯಕ್ತಿ ಹುಡುಕಾಟ ನಡೆಸುತ್ತಿದ್ದ ಎಂದು ಈ ವೇಳೆ ಗೊತ್ತಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಮೊಬೈಲ್ ಹಾಗೂ ಬೈಕ್ ಅನ್ನು ಜಪ್ತಿ ಮಾಡಲಾಗಿದೆ. ಅಲ್ಲದೇ ಡ್ರಗ್ ಪೆಡ್ಲರ್ ಯಾರು ಎಂದು ವಿಚಾರಣೆ ನಡೆಸಲಾಗುತ್ತಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *