Breaking News

ದೊಡ್ಡಬಳ್ಳಾಪುರ: ಕಾರು ಪಲ್ಟಿ; ಭೀಮೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದ ಐವರು ಸ್ಥಳದಲ್ಲೇ ಸಾವು!

ಕಾರಿನಲ್ಲಿ ಎಂಟು ಜನರು ದೊಡ್ಡಬಳ್ಳಾಪುರದಿಂದ ಗೌರಿಬಿದನೂರು ಸಮೀಪದ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ಹೊರಟಿದ್ದರು.ಕಾರಿನಲ್ಲಿದ್ದ ಇನ್ನೂ ಮೂವರ ಸ್ಥಿತಿ ಗಂಭೀರವಾಗಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರಿಗೆ ಮಾತ್ರ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಲಾರಿಯೊಂದನ್ನು ಓವರ್ ಟೇಕ್ ಮಾಡುವ ವೇಳೆ‌ ಎದುರಿನಿಂದ ಕೆಎಸ್​ಆರ್​ಟಿಸಿ ಬಸ್ ಬಂದಿದೆ. ಬಸ್ ಹಾಗೂ ಲಾರಿಯನ್ನು ತಪ್ಪಿಸಲು ಹೋಗಿ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರು ಪಲ್ಟಿಯಾಗಿದ್ದೇ ಘಟನೆ ಕಾರಣವಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *