Breaking News

ಶೌಚಾಲಯದಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ಚಿತ್ರೀಕರಣ, ಆರೋಪಿ ಅರೆಸ್ಟ್!

ನಾಗೇಶ್ ಮಹಿಳಾ ಉದ್ಯೋಗಿಯ ಶೌಚಾಲಯದ ವಿಡಿಯೋ ರೆಕಾರ್ಡ್ ಮಾಡಿದ್ದ. ಪಕ್ಕದ ಶೌಚಾಲಯದ ಕಮೋಡ್ ಮೇಲೆ ನಿಂತು ರೆಕಾರ್ಡ್ ಮಾಡಿದ್ದಾನೆ. ಈತ ರೆಕಾರ್ಡ್ ಮಾಡುತ್ತಿರುವುದು ಎದುರುಗಡೆ ಡೋರ್ ಮೇಲೆ ಪ್ರತಿಬಿಂಬ ಮೂಡಿದೆ. ಕೂಡಲೇ ಹೊರ ಬಂದು ನೋಡಿದಾಗ ಯಾರೂ ಇರಲಿಲ್ಲ. ಮತ್ತೆ ಶೌಚಾಲಯದ ಒಳ ಹೋಗಿ ಆಕೆ ಪರಿಶೀಲನೆ ಮಾಡಿದ್ದಾರೆ. ಆಗ ಆರೋಪಿ ಸಿಕ್ಕಿಬಿದ್ದಿದ್ದಾನೆ. ಕೂಡಲೇ ಮಹಿಳೆ ಕಿರುಚಾಡಿದ್ದು, ಅಲ್ಲಿಯೇ ಮಹಿಳಾ ಉದ್ಯೋಗಿಯ ಕ್ಷಮೆ ಕೇಳಿದ್ದಾನೆ. ಈ ಹಂತದಲ್ಲಿ ಎಚ್‌ಆರ್ ಸಿಬ್ಬಂದಿ ಬಂದು ಪರಿಶೀಲನೆ ಮಾಡಿದ್ದು, ಸುಮಾರು 30ಕ್ಕೂ ಅಧಿಕ ಮಹಿಳೆಯರ ವಿಡಿಯೋ ಇದರಲ್ಲಿ ಪತ್ತೆಯಾಗಿದೆ.ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಮಹಿಳಾ ಉದ್ಯೋಗಿ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *