ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 18 ಕೋತಿಗಳ ಶವ ಪತ್ತೆಯಾಗಿದೆ.ಕೋತಿಗಳಿಗೆ ವಿಷವಿಕ್ಕಿ ಕೊಲೆ ಮಾಡಿರುವುದು ಖಚಿತ ಎಂದು ವೈದ್ಯ ಡಾ. ಮಹದೇಶ್ ಹೇಳಿದ್ದಾರೆ. ‘ಟಿವಿ9’ಗೆ ಪ್ರತಿಕ್ರಿಯೆ ನೀಡಿದ ಅವರು, ಒಟ್ಟು 18 ಕೋತಿಗಳು ಸಾವನ್ನಪ್ಪಿವೆ. ಎರಡು ಕೋತಿಗಳು ಜೀವಂತವಾಗಿದ್ದವು. ನಿತ್ರಾಣಗೊಂಡ ಅವುಗಳನ್ನು ಈಗಾಗಲೇ ಜಿಲ್ಲಾಸ್ಪತ್ರೆಗೆ ತೆಗೆದುಕೊಂಡು ಹೋಗಿ ಚಿಕಿತ್ಸೆ ನೀಡುತ್ತಿದ್ದೇವೆ. ಚಿಕಿತ್ಸೆ ಪಡೆಯುತ್ತಿರುವ ಕೋತಿಗಳು ಅಲ್ಪ ಪ್ರಮಾಣದಲ್ಲಿ ಚೇತರಿಸಿಕೊಂಡಿವೆ. ಇನ್ನು ಮೂರು ಕೋತಿಗಳಿಗೆ ಪ್ರಜ್ಞೆಯಿದ್ದು ಪರಾರಿಯಾಗಿವೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

