ಬೆಂಗಳೂರಿನ ಗ್ರಾಮಾಂತರ ಜಿಲ್ಲೆಗೆ ಸಚಿವ ಸಂಪುಟ ಅನುಮೋದನೆಯನ್ನು ಕೊಟ್ಟರೆ ಬೆಂಳೂರು ಗ್ರಾಮಾಂತರ ಬೆಂಗಳೂರು ಉತ್ತರ ಎಂದು ಮರುನಾಮಕರಣ ಆಗುತ್ತದೆ. ಜೊತಗೆ ಆರ್ಥಿಕ ಅಭಿವೃದ್ಧಿಗೂ ಸಹ ನೆರವಾಗುತ್ತದೆ. ಬೆಂಗಳೂರಿನಲ್ಲಿ ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗಗಳನ್ನು ಮರುನಾಮಕರಣ ಮಾಡುವುದರಿಂದ ಕೈಗಾರಿಕಾ ಬೆಳವಣಿಗೆಯನ್ನು ಸಮಾನವಾಗಿ ವಿಸ್ತರಿಸಲು ಸಹಾಯವಾಗುತ್ತದೆ. ಬೆಂಗಳೂರು ಗ್ರಾಮಾಂತರದ ಹೆಸರು ಬದಲಾವಣೆಯ ಜೊತೆಗೆ, ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡುವ ಬಗ್ಗೆಯೂ ರಾಜ್ಯ ಸರ್ಕಾರ ಚಿಂತನೆಯನ್ನು ನಡೆಸಿತ್ತು ಅದಕ್ಕೂ ಕೂಡ ಇಂದು ಸಚಿವ ಸಂಪುಟ ಒಪ್ಪಿಗೆ ಕೊಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

