ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂಪಾಯಿ ಹಗರಣದ ಸಮಗ್ರ ತನಿಖೆ ನಡೆಸುವಂತೆ ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ಹೈಕೋರ್ಟ್ ಮಂಗಳವಾರ ಆದೇಶಿಸಿದೆ ಎನ್ನಲಾಗಿದೆ.ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಿಬಿಐಗೆ ವರ್ಗಾಯಿಸುವಂತೆ ಎಸ್‌ಐಟಿಗೆ ನ್ಯಾಯಾಲಯ ಆದೇಶಿಸಿದೆ. ಅಲ್ಲದೆ ವಿಸ್ತೃತವಾದ ಸ್ಥಿತಿಗತಿಯ ವರದಿ ಸಲ್ಲಿಸುವಂತೆ ಸಿಬಿಐಗೆ ಆದೇಶಿಸಿದೆ. ನಾನು, ಕುಮಾರ್ ಬಂಗಾರಪ್ಪ, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಸೇರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ನ್ಯಾಯ ಸಿಕ್ಕಿದೆ. ತಪ್ಪಿತಸ್ಥರನ್ನು ಸಿಬಿಐ ಶಿಕ್ಷೆಗೆ ಒಳಪಡಿಸುವ ವಿಶ್ವಾಸವಿದೆ. ಈ ಮೂಲಕ ಆತ್ಮಹತ್ಯೆಗೆ ಒಳಗಾಗಿದ್ದ ಚಂದ್ರಶೇಖರ್ ಕುಟುಂಬಕ್ಕೂ ನ್ಯಾಯ ಸಲ್ಲುವ ನಂಬಿಕೆಯಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

