Breaking News

ಹಾಸನ ‘ಸರಣಿ ಹೃದಯಾಘಾತ’ಕ್ಕೆ ಕೋವಿಡ್ ಲಸಿಕೆಯೂ ಕಾರಣ : CM ಸಿದ್ದರಾಮಯ್ಯ ಶಂಕೆ.!

ಸಿಎಂ ಸಿದ್ದರಾಮಯ್ಯ ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ.ಜನರ ಆರೋಗ್ಯ ರಕ್ಷಣೆಗಾಗಿ ಒಂದು ಸರ್ಕಾರವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಾವು ಮಾಡುತ್ತಿದ್ದು, ಸಾರ್ವಜನಿಕರು ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರದೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ

Share News

About BigTv News

Check Also

ಪತ್ನಿಯ ಅಕ್ರಮ ಸಂಬಂಧ ಆರೋಪ: ಮನನೊಂದು ಆಟೋ ಚಾಲಕ ಆತ್ಮಹತ್ಯೆ

ಆನೇಕಲ್: ಪತ್ನಿಯ ಅಕ್ರಮ ಸಂಬಂಧದ ಆರೋಪ ಹಾಗೂ ಮಾನಸಿಕ ಕಿರುಕುಳದಿಂದ ಮನನೊಂದು ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ …

Leave a Reply

Your email address will not be published. Required fields are marked *