14 ವರ್ಷದ ಅಪ್ರಾಪ್ತ ಬಾಲಕಿಯನ್ನು ರೂಮ್ನಲ್ಲಿನ ಮಂಚದ ಕೆಳಗೆ ಕೂಡಿ ಹಾಕಿ ಲಕ್ಕವ್ವ ಚಿತ್ರಹಿಂಸೆ ಕೊಟ್ಟಿರುವುದು ಬೆಳಕಿಗೆ ಬಂದಿತ್ತು. ವಿಷಯ ತಿಳಿದ ಬ್ಯಾಗವಾದಿ ಗ್ರಾಮಸ್ಥರು ಮಹಿಳೆಗೆ ಧರ್ಮದೇಟು ಕೊಟ್ಟು ಬಾಲಕಿಯನ್ನು ರಕ್ಷಿಸಿದ್ದಾರೆ.ಮನೆ ಬಿಟ್ಟು ಬಂದವರು, ಬಡವರು, ಅನಾಥರು, ನೊಂದ ಯುವತಿಯರು, ಬಾಲಕಿಯರನ್ನೇ ಮಹಿಳೆ ಟಾರ್ಗೆಟ್ ಮಾಡುತ್ತಿದ್ದಳಂತೆ. ಈ ಬಾಲಕಿಯರನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಬಂದು ಲಕ್ಷಾಂತರ ರೂಪಾಯಿಗೆ ಮಾರಾಟ ಅಥವಾ ಮದುವೆ ಮಾಡಿಕೊಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ.ಪೊಲೀಸರು ಯುವತಿಯನ್ನು ಚಿಕ್ಕಮಗಳೂರಿಗೆ ವಾಪಾಸ್ ಕಳುಹಿಸಿದ್ದರು. ಈಗ ಮತ್ತೊಬ್ಬ ಬಾಲಕಿಯನ್ನು ಕೂಡಿ ಹಾಕಿ ಚಿತ್ರಹಿಂಸೆ ನೀಡಿದ ಪ್ರಕರಣ ಬಯಲಿಗೆ ಬಂದಿದೆ. ಆಡೂರು ಪೊಲೀಸ್ ಠಾಣೆ ದೂರು ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

