Breaking News

ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು- ಚಾಲಕ ಪಾರು!

ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ ತೆರಳುತ್ತಿದ್ದ ಕಾರೊಂದು ತಡರಾತ್ರಿ ಸುಮಾರು 2 ಗಂಟೆಗೆ ನಾರ್ಲಪದವು ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ.ಪರಿಣಾಮ ಕಾರಿನ ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ.ಅವಘಡದಲ್ಲಿ ಕಾರು ಸಂಪೂರ್ಣ ಭಸ್ಮಗೊಂಡಿದ್ದು, ಕಾರಿನಲ್ಲಿದ್ದ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇದು ಕೊಳಂಬೆ ಮೂಲದ ವ್ಯಕ್ತಿಯೊಬ್ಬರಿಗೆ ಸೇರಿದ ಟೂರಿಸ್ಟ್ ಕಾರು ಎಂದು ತಿಳಿದು ಬಂದಿದೆ.

Share News

About BigTv News

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *