Breaking News

20ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ ನಕಲಿ ಪೊಲೀಸ್!!

30 ವರ್ಷದ ನೌಶಾದ್ ತ್ಯಾಗಿ ಎಂಬಾತ ರಾಹುಲ್ ತ್ಯಾಗಿ ಎಂಬ ಹೆಸರಿಟ್ಟುಕೊಂಡು ನಾನು ಪೊಲೀಸ್ ಅಂತ ನಕಲಿ ಪೊಲೀಸ್ ಡ್ರೆಸ್ ಧರಿಸಿ ಮಹಿಳೆಯರನ್ನು ಬಕ್ರಾ ಮಾಡುತ್ತಿದ್ದ. ‘ಅರ್ಧದಲ್ಲೇ ಶಾಲೆ ಬಿಟ್ಟಿದ್ದ ನೌಶಾದ್, ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದ. ವಿಧವೆಯರು ಮತ್ತು ಪತಿಯಿಂದ ಬೇರ್ಪಟ್ಟವರನ್ನೇ ಪರಿಚಯ ಮಾಡಿಕೊಂಡು, ಲೈಂಗಿಕ ಹಿಂಸೆ ನೀಡಿ ಎಸ್ಕೇಪ್ ಆಗುತ್ತಿದ್ದ’ ಎಂದು ಎಸ್‌ಎಸ್‌ಪಿ ಸಂಜಯ್ ಕುಮಾರ್ ವರ್ಮಾ ಹೇಳಿದ್ದಾರೆ.ಮಹಿಳೆಯೊಬ್ಬರು ಮುಜಫರ್​ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಾಗ ಈ ವಿಷಯ ಬೆಳಕಿಗೆ ಬಂದಿದ್ದು, ಮುಜಫರ್‌ನಗರದ ಚರ್ತವಾಲ್ ನಿವಾಸಿ ನೌಶಾದ್​ನನ್ನ ಬಂಧಿಸಲಾಗಿದೆ. ಆರೋಪಿಯಿಂದ ನಕಲಿ ಪೊಲೀಸ್ ಸಮವಸ್ತ್ರವನ್ನು ವಶಪಡಿಸಿಕೊಳ್ಳಲಾಗಿದೆ. ಬಿಎನ್‌ಎಸ್ ಸೆಕ್ಷನ್ 69 ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *