Breaking News

ಬೆಂಗಳೂರು :ವಿದ್ಯುತ್ ಸಂಪರ್ಕ ಬಗ್ಗೆ ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ!

ರಾಜ್ಯದಲ್ಲಿ ಕಂದಾಯ ನಿವೇಶನ ಹಾಗೂ ಕಟ್ಟಡಗಳಿಗೆ ಬಿ ಖಾತಾ ನೀಡಿ ತೆರಿಗೆ ವ್ಯಾಪ್ತಿಗೆ ಒಳಪಡಿಸುವ ಕುರಿತು ಗುರುವಾರ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.ಇದರೊಂದಿಗೆ ರಾಜ್ಯಾದ್ಯಂತ ಸಿಸಿ, ಒಸಿ ಇಲ್ಲದ ವಾಣಿಜ್ಯ ಮತ್ತು ವಸತಿ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡದಿರುವುದರಿಂದ ಉಂಟಾಗಿರುವ ಸಮಸ್ಯೆ ಬಗ್ಗೆ ಚರ್ಚೆ ನಡೆಸಲಾಗಿದ್ದು, ಇವೆಲ್ಲವುಗಳ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲು ತೀರ್ಮಾನಿಸಲಾಗಿದೆ.ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ ಸೇರಿದಂತೆ ಹಲವು ಸಚಿವರು, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *