ಬೆಂಗಳೂರಿನ ಮಲ್ಲೇಶ್ವರಂನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಶಂಕಿತ ಉಗ್ರ ಅಬೂಬಕರ್‌ನನ್ನು ತಮಿಳುನಾಡು ಉಗ್ರ ನಿಗ್ರಹ ಪಡೆ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಬಂಧಿಸಿದೆ. ಕಳೆದ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪಾತಕಿ ಜೊತೆಗೆ ಆತನ ಸಹಚರ ಮಹಮ್ಮದ್ ಅಲಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.ನಿಷೇಧಿತ ಭಯೋತ್ಪಾದಕ ಸಂಘಟನೆ ಅಲ್ ಉಮ್ಮಾ ಜೊತೆಗೆ ಕೈಜೋಡಿಸಿರುವ ತಮಿಳುನಾಡಿನ 20 ಕ್ಕೂ ಹೆಚ್ಚು ಜನರು ಮಲ್ಲೇಶ್ವರಂ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಘಟನೆ ಬಳಿಕ ಶಂಕಿತ ಉಗ್ರ ಅಬೂಬಕರ್ ತಲೆಮರೆಸಿಕೊಂಡಿದ್ದ. ಉಗ್ರನಿಗಾಗಿ ಕಾರ್ಯಾಚರಣೆ ಮುಂದುವರಿಸಿದ್ದ ತನಿಖಾ ತಂಡಗಳು ಕೊನೆಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

