ಬಿಹಾರದ ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ತಮ್ಮ ನಿವಾಸದ ಬಳಿ ಬೈಕ್‌ನಲ್ಲಿ ಬಂದ ದುಷ್ಕರ್ಮಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.ಪೊಲೀಸರು ತಕ್ಷಣಕ್ಕೆ ಸ್ಥಳಕ್ಕೆ ತೆರಳಿದರು. ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದರು ಹಾಗೂ ವಿಧಿವಿಜ್ಞಾನ ತಜ್ಞರು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.ಸ್ಥಳದಿಂದ ಒಂದು ಗುಂಡು ಮತ್ತು ಕಾರ್ಟ್ರಿಡ್ಜ್ ವಶಪಡಿಸಿಕೊಳ್ಳಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ. ಬೈಕ್‌ನಲ್ಲಿ ಬಂದ ಅಪರಿಚಿತ ದುಷ್ಕರ್ಮಿ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಸ್ಥಳೀಯರು ಹೇಳಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

