Breaking News

ಹುಬ್ಬಳ್ಳಿ | ಜಾತ್ರೆ ಬಂದೋಬಸ್ತ್‌ಗೆ ತೆರಳಿದ್ದ ಎಎಸ್‌ಐ ಹೃದಯಾಘಾತದಿಂದ ಸಾವು!

ಬೆಳಗಾವಿಯ ಗೋಕಾಕಿನ ಮಹಾಲಕ್ಷ್ಮಿ ದೇವಿ ಜಾತ್ರೆಯ ಬಂದೋಬಸ್ತ್‌ಗೆ ತೆರಳಿದ್ದ ಇಲ್ಲಿಯ ನವನಗರ ಪೊಲೀಸ್ ಠಾಣೆಯ ಎಎಸ್‌ಐ ಲಾಲಸಾಬ್ ಮೇರಾನಾಯ್ಕ(54) ಶನಿವಾರ ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಎರಡು ದಿನಗಳ ಹಿಂದೆ ಅವರು ಗೋಕಾಕಿಗೆ ತೆರಳಿದ್ದರು. ಶುಕ್ರವಾರ ರಾತ್ರಿ ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯ ಮುಗಿಸಿ ಗೋಕಾಕಿನಲ್ಲಿರುವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಶನಿವಾರ ಬೆಳಿಗ್ಗೆ ಹೃದಯಾಘಾತವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *