Breaking News

ವಿಮಾನ ಟೇಕ್ ಆಫ್ ಆಗುವ ಸಮಯದಲ್ಲಿ ಇಂಜಿನ್ನಲ್ಲಿ ಸಿಲುಕಿ ವ್ಯಕ್ತಿ ಸಾವು!

ಸ್ಪೇನ್​ನ ಆಸ್ಟೂರಿಯಸ್‌ಗೆ ತೆರಳುತ್ತಿದ್ದ A319 ವೊಲೊಟಿಯಾ ವಿಮಾನ ಟೇಕಾಫ್​ ಆಗುವ ಸಮಯದಲ್ಲಿ ರನ್‌ವೇಗೆ ಓಡಿಬಂದ 35 ವರ್ಷದ ವ್ಯಕ್ತಿ ಇಂಜಿನ್​ಗೆ ಸಿಲುಕಿ ಮೃತಪಟ್ಟಿದ್ದಾನೆ. ಅಪಘಾತದ ಬಳಿಕ ಸುಮಾರು ಎರಡು ಗಂಟೆಗಳ ಕಾಲ ವಿಮಾನ ಸಂಚಾರದಲ್ಲಿ ಅಡಚಣೆ ಉಂಟಾಯಿತು ಎಂದು ಮಿಲನ್ ಬರ್ಗಾಮೊ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.ವಿಮಾನದಲ್ಲಿ ಆರು ಸಿಬ್ಬಂದಿ, ಇಬ್ಬರು ಪೈಲಟ್‌ಗಳು ಮತ್ತು ನಾಲ್ವರು ಕ್ಯಾಬಿನ್ ಸಿಬ್ಬಂದಿ ಸೇರಿದಂತೆ ಒಟ್ಟು 154 ಪ್ರಯಾಣಿಕರಿದ್ದರು. ಈ ವಿಮಾನ ನಿಲ್ದಾಣ ಜಗತ್ತಿನ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ. 2024 ರಲ್ಲಿ ಈ ವಿಮಾನ ನಿಲ್ದಾಣವು 17 ಮಿಲಿಯನ್‌ಗಿಂತಲೂ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸಿತು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *