ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ರವಿವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಮಹಿಳೆ ಸೋಮವಾರ ನಸುಕಿನಲ್ಲಿ ಮೃತಪಟ್ಟಿದ್ದಾರೆ.ಗೀತಮ್ಮನ ಮೈಯಲ್ಲಿ ಆತ್ಮವೊಂದು ಹೊಕ್ಕಿದೆ. ಪೂಜೆ ಮಾಡಿ ಅದನ್ನು ಹೊರ ಹಾಕುತ್ತೇನೆ ಎಂದು ಆಶಾ ತಿಳಿಸಿದ್ದರು. ಹೀಗಾಗಿ ಅವರ ಮನೆಗೆ ಕರೆದೊಯ್ದಿದ್ದೆವು. ಮೊದಲಿಗೆ ದೇವರ ಪೂಜೆ ಮಾಡಿದ್ದರು. ನಂತರ ದೆವ್ವ ಓಡಿಸುವೆ ಎಂದು ತಲೆ ಮೇಲೆ ಕಲ್ಲು ಹೊರಿಸಿ ಗ್ರಾಮದ ಹೊರಗಿನ ಮರವೊಂದರ ಬಳಿಗೆ ಕರೆದೊಯ್ದರು. ಮರದ ಟೊಂಗೆಯೊಂದನ್ನು ಕಿತ್ತುಕೊಂಡು ಅಲ್ಲಿ ಮನಬಂದಂತೆ ಥಳಿಸಿದರು. ತಲೆ ಮೇಲೆ ದೊಡ್ಡ ಗಾತ್ರದ ಕಲ್ಲು ಹೊರಿಸಿ ಪಕ್ಕದ ಕಾಲುವೆಯಲ್ಲಿದ್ದ ತಣ್ಣೀರು ಎರಚಿದರು. ಚಳಿ ತಾಳಲಾಗದೇ ನಡುಗುತ್ತಿದ್ದ ಅಮ್ಮ ಕುಸಿದು ಬಿದ್ದರು ಎಂದು ಸಂಜಯ್ ಹೊಳೆಹೊನ್ನೂರು ಠಾಣೆ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

