Breaking News

ಚಿಕ್ಕಮ್ಮನೊಂದಿಗೆ ಬಲವಂತ ಮದುವೆ! ತಂದೆ-ತಾಯಿಯ ಮೇಲೂ ಹಲ್ಲೆ!

ವಿವಾಹೇತರ ಸಂಬಂಧವಿದೆ ಎಂದು ಅರೋಪಿಸಿ, ಯುವಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿ, ಆತನ ಚಿಕ್ಕಮನ ಜೊತೆ ಬಲವಂತವಾಗಿ ಮದುವೆ ಮಾಡಿಸಿರುವ ಘಟನೆ ಬಿಹಾರದ ಸುಪೌಲ್​ ಜಿಲ್ಲೆಯಲ್ಲಿ ಕಳೆದವಾರ ನಡೆದಿದೆ.ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಭೀಮ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಂಜ್ ನಿವಾಸಿಗಳಾದ ರಾಜ ಕುಮಾರ್, ವಿಕಾಸ್ ಮುಖಿಯಾ, ಶಿವಚಂದ್ರ ಮುಖಿಯಾ, ಸೂರಜ್ ಮುಖಿಯಾ, ಪ್ರದೀಪ್ ಠಾಕೂರ್ ಹಾಗೂ ಸುರೇಶ್ ಮುಖಿಯಾ ಎಂಬುವರೇ ನನ್ನ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಇವರೆಲ್ಲರೂ ಜೀವ್‌ಚಾಪುರ ನಿವಾಸಿಗಳು ಎಂದು ರಾಮಚಂದ್ರ ಹೇಳಿದ್ದಾರೆ.

ಈ ಘಟನೆಯ ಬಗ್ಗೆ ಭೀಮಪುರ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮಿಥಲೇಶ್ ಪಾಂಡೆ ಮಾತನಾಡಿ, ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ. ಮಿಥಲೇಶ್ ಅವರನ್ನು ಆರಂಭದಲ್ಲಿ ನರಪತ್‌ಗಂಜ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ, ನಂತರ ಅವರ ಸ್ಥಿತಿ ಗಂಭೀರವಾಗಿದ್ದು, ಅರಾರಿಯಾ ಸದರ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು ಎಂದು ತಿಳಿಸಿದ್ದಾರೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *