ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿ ನಿರ್ದೇಶನಾಲಯ (ED) 300 ಕೋಟಿ ರೂ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿತ್ತು. ಈ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಬಹಿರಂಗವಾಗಿರಲಿಲ್ಲ. ಆದರೆ ಇದೀಗ ಮುಟ್ಟುಗೋಲು ಹಾಕಿದ ಪಟ್ಟಿಯನ್ನು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಸೇರಿ ಸಬ್ ರಿಜಿಸ್ಟ್ರಾರ್ ಕಚೇರಿಗೆ ಇ.ಡಿ ರವಾನೆ ಮಾಡಿದೆ.7 ನೇ ವಯಸ್ಸಿನಲ್ಲಿ ಭೂಮಿ ಕಳೆದುಕೊಂಡಿದ್ದೇನೆ ಎಂದು ಅರ್ಜಿ ಹಾಕಿದ್ದ ಅಬ್ದುಲ್ ವಾಹಿದ್ ಎಂಬಾತನಿಗೆ ನೀಡಿದ್ದ 41 ಸೈಟ್ಗಳನ್ನು ಇ.ಡಿ ವಶಕ್ಕೆ ಪಡೆದುಕೊಂಡಿದೆ. ಅಲ್ಲದೆ ಕುವೆಂಪು ನಗರದ ರವಿಕುಮಾರ್, ಸುಜಾತ, ಮಹೇಶ್ ಹಾಗೂ ರಾಜು ಕುಟುಂಬಕ್ಕೆ ನೀಡಿದ್ದ 31 ನಿವೇಶನಗಳು ಮತ್ತು ಪ್ರತಿಷ್ಠಿತ ಆಂದೋಲನ ವೃತ್ತದ ಬಳಿ ಹಲವರಿಗೆ ನೀಡಿದ್ದ 48 ಬೇನಾಮಿ ಸೈಟ್ಗಳನ್ನು ಇಡಿ ಮುಟ್ಟುಗೋಲು ಹಾಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

