Breaking News

ನೀರಿಗಾಗಿ ತಂದೆ-ತಾಯಿ ಪಡುತ್ತಿರುವ ಕಷ್ಟ ನೋಡಲಾಗದೇ ಸಿಎಂಗೆ ಪತ್ರ ಬರೆದ 5ನೇ ಕ್ಲಾಸ್ ವಿದ್ಯಾರ್ಥಿನಿ!

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ 5ನೇ ತರಗತಿ ಮಗು, ತಮ್ಮ ತಂದೆ-ತಾಯಿಯಂದಿರು ಕೃಷಿಯಲ್ಲಿ ಅನುಭವಿಸುತ್ತಿರುವ ಕಷ್ಟವನ್ನು ಸಹಿಸಲಾಗದೆ ನೇರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಗಮನ ಸೆಳೆದಿದ್ದಾರೆ.ಹನೂರು ತಾಲೂಕಿನ ರಾಮಾಪುರ ಹೋಬಳಿಯ ಎಲ್ಲ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸುವ ಯೋಜನೆಯನ್ನು ಕೈಗೊಳ್ಳಬೇಕು. ಈ ಮೂಲಕ ಭೂಮಿಯಲ್ಲಿನ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ, ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಪತ್ರದ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.ಇನ್ನು ಜನರ ಬಳಿಗೆ ತೆರಳಿ ಸಮಸ್ಯೆ ಆಲಿಸಿದ ಸಿಇಒ ಮೋನಾರೋತ್, ಕುಡಿಯುವ ನೀರು ಪೂರೈಸಲು ಪ್ರತ್ಯೇಕ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಜೊತೆಗೆ ನದಿಯಿಂದ ನೀರು ತುಂಬಿಸುವ ಬಗ್ಗೆ ಸರ್ಕಾರದ ಜೊತೆಗೆ ಚರ್ಚಿಸುವುದಾಗಿ ತಿಳಿಸಿದರು.ಒಟ್ಟಿನಲ್ಲಿ ಪುಟ್ಟ ಮಕ್ಕಳ ಚಿಂತನೆ ಜನರಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ. ಸಿಎಂ ಸಿದ್ದರಾಮಯ್ಯ ಮಕ್ಕಳ ಮನವಿ ಸ್ಪಂದಿಸ್ತಾರಾ? ಈ ಭಾಗಕ್ಕೆ ಶಾಶ್ವತ ಕುಡಿಯುವ ನೀರಿನ ಯೋಜನೆ ಸಿಗುತ್ತಾ ಎನ್ನುವುದನ್ನು ಕಾದುನೋಡಬೇಕಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *