Breaking News

ಬೆಳಗಾವಿ: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

ಸಂತೋಷ್ ಹಾಗೂ ಕುಟುಂಬದವರು ಡೆತ್​ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಇದರ ಪ್ರಕಾರ, ಚೀಟಿ ವ್ಯಹಾರ ಮತ್ತು ರಾಜು ಎಂಬಾತ ಚಿನ್ನ ತೆಗೆದುಕೊಂಡು ಹೋಗಿ ವಾಪಸ್ ಕೊಡದೆ ವಂಚಿಸಿದ್ದೇ ಘಟನೆಗೆ ಕಾರಣ ಎಂಬುದು ತಿಳಿದುಬಂದಿದೆ.ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ತಾಯಿ ಮತ್ತು ತಂಗಿಯರಿಗೆ ಎರಡು ಗಂಟೆಗಳ ಕಾಲ ಸಂತೋಷ್ ಮನವೊಲಿಕೆ ಮಾಡಿದ್ದರು. ಸಾವೇ ತಮಗೆ ಕೊನೆ ದಾರಿ ಅನ್ನೋದನ್ನ ಕುಟುಂಬಸ್ಥರಿಗೆ ಮನವರಿಕೆ ಮಾಡಲು ಯತ್ನಿಸಿದ್ದರು. ಬಳಿಕ ತಂದಿದ್ದ ವಿಷವನ್ನು ಕುಟುಂಬಸ್ಥರಿಗೆ ನೀಡಿ ಬಳಿಕ ತಾನೂ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆದರೆ, ಸುನಂದಾ ಆರಂಭದಲ್ಲಿ ವಿಷ ಕುಡಿಯುವುದಕ್ಕೆ ವಿರೋಧ ಮಾಡಿದ್ದರು. ಹೀಗಾಗಿ ಆಕೆಯನ್ನು ಬಿಟ್ಟು ಮೂರು ಜನ ಮೊದಲು ವಿಷ ಸೇವನೆ ಮಾಡಿದ್ದರು. ಆ ನಂತರ, ಎಲ್ಲರೂ ಹೋದ ಮೇಲೆ ತಾನೇನು ಮಾಡುವುದು ಎಂದು ಕೊನೆಯಲ್ಲಿ ಸುನಂದಾ ವಿಷ ಸೇವಿಸಿದ್ದಾರೆ. ಅವರು ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *