Breaking News

ಬೆಂಗಳೂರಲ್ಲಿ ಭೀಕರ ಮರ್ಡರ್ – 14 ವರ್ಷದ ಬಾಲಕಿಯ ಕಗ್ಗೊಲೆ!!

ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿಯ ಭೀಕರ ಕೊಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ,14 ವರ್ಷದ ಅರುಣ ಎಂಬ ಬಾಲಕಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ.ಮೃತ ಬಾಲಕಿ ಅರುಣ ಅವರ ತಂದೆ ಮತ್ತು ತಾಯಿ ಕೆಲಸಕ್ಕೆ ತೆರಳಿದ್ದರು.ಈ ವೇಳೆ ಶಾಲೆಗೆ ತೆರಳಬೇಕಿದ್ದ ಬಾಲಕಿ ಕಾರಣಾಂತರಗಳಿಂದ ಶಾಲೆಗೆ ಹೋಗದೇ ಮನೆಯಲ್ಲಿ ಏಕಾಂಗಿಯಾಗಿ ಉಳಿದಿದ್ದಳು ಎನ್ನಲಾಗಿದೆ.ಈ ವೇಳೆ ಮನೆಯಲ್ಲಿಯೇ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.

ಈ ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ತಾವರೆಕೆರೆ ಠಾಣೆಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಾಥಮಿಕ ಮಾಹಿತಿಗಳನ್ನು ಕಲೆ ಹಾಕಿದ್ದಾರೆ.ಯಾರು..ಯಾವ ಕಾರಣಕ್ಕೆ ಈ ಕೃತ್ಯವೆಸಗಿದ್ದಾರೆ ಎಂಬುದು ತನಿಖೆಯಿಂದ ಬಯಲಾಗಬೇಕಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *