Breaking News

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ, ಸಂಸದ ಯದುವೀರ್ ಒಡೆಯರ್ ಹೇಳಿಕೆ!

ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಪಕ್ಷದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಕಾಂಗ್ರೆಸ್ ನೇತೃತ್ವದ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಕೊಡಗು ಮೈಸೂರು ಸಂಸದ ಯದುವೀರ್ ಒಡೆಯರ್ ಟೀಕಿಸಿದ್ದಾರೆ. ಕೊಡಗಿನಲ್ಲಿ ನಾವು ಎರಡು ಶಾಸಕರನ್ನು ಕಳೆದು ಕೊಂಡಿದ್ದೇವೆ. ಆದರೆ ಆಡಳಿತ ಪಕ್ಷದಿಂದ ಗೆದ್ದಿರುವ ಶಾಸಕರಿಗೆ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗುತ್ತಿಲ್ಲವೆಂದರು. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಕೊಡಗಿನ ರಸ್ತೆಗಳು ಹೇಗಿದ್ದವು, ಈಗ ಹೇಗಿದೆ, ರಸ್ತೆಗಳ ಅಭಿವೃದ್ಧಿ ಮಾಡಬೇಕಾಗಿದ್ದು ರಾಜ್ಯ ಸರ್ಕಾರದ ಹೊಣೆ ಎಂದರು. ರಾಜ್ಯ ಸರ್ಕಾರದ ದುರಾಡಳಿತವನ್ನು ಖಂಡಿಸಬೇಕಾಗಿದ್ದು, ಪ್ರತಿಭಟಿಸಬೇಕಾಗಿದ್ದು ನಮ್ಮೆಲ್ಲರ ಹೊಣೆಯಾಗಿದೆ. ಇಂತಹ ಸರ್ಕಾರವನ್ನು ಅಂತ್ಯಗೊಳಿಸಿ ಮುಂದೆ ಸುಭಿಕ್ಷ ಹಾಗೂ ಜನಪರವಾದ ಬಿಜೆಪಿ ಸರ್ಕಾರವನ್ನು ಆಡಳಿತಕ್ಕೆ ತರಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯವಾಗಬೇಕು ಎಂದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *