Breaking News

ಮೊರಾರ್ಜಿ‌ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಸಾವು: ನಿವೃತ್ತ ಜಡ್ಜ್​​ ನೇತೃತ್ವದಲ್ಲಿ ತನಿಖೆಗೆ ಆದೇಶ!

ಕೊಪ್ಪ ಪಟ್ಟಣದಲ್ಲಿನ ಮೊರಾರ್ಜಿ ವಸತಿ ಶಾಲೆಯಲ್ಲಿ 9ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣವನ್ನು ನಿವೃತ್ತ ನ್ಯಾಯಾಧೀಶೆ ಶೋಭಾ ನೇತೃತ್ವದಲ್ಲಿ ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ. ಶಮಿತಾ 2025ರ ಜೂನ್ 29ರಂದು ಶಾಲೆಯ ಶೌಚಾಲಯದಲ್ಲಿ ವೇಲ್​ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. 2023 ಜುಲೈ 27ರಂದು ವಿದ್ಯಾರ್ಥಿನಿ ಅಮುಲ್ಯ ವಸತಿ ಶಾಲೆಯ ಬಾತ್​ರೂಂನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಇಬ್ಬರೂ ವಿದ್ಯಾರ್ಥಿನಿಯರು ಒಂದೇ ಸ್ಥಳದಲ್ಲಿ, ಒಂದೇ ಕಬ್ಬಿಣಕ್ಕೆ, ಒಂದೇ ಶೈಲಿಯಲ್ಲಿ ನೇಣು ಹಾಕಿಕೊಂಡಿದ್ದರು. ಇದು ವಿದ್ಯಾರ್ಥಿನಿಯರ ಪೋಷಕರಲ್ಲಿ ಮತ್ತು ಸಾರ್ಜನಿಕರಲ್ಲಿ ಅನುಮಾನ ಹುಟ್ಟುಹಾಕಿತ್ತು. ಈ ಹಿನ್ನೆಲೆಯಲ್ಲಿ ಪೋಷಕರು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *