Breaking News

ಬೆಂಗಳೂರಿನಲ್ಲಿ ಬರ್ಬರ ಕೃತ್ಯ, ಅತ್ಯಾಚಾರ ಎಸಗಿ ಬಾಲಕಿಯ ಕೊಲೆ!!

ಬೆಂಗಳೂರು ದಕ್ಷಿಣ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ಕೊಪ್ಪಳ ಮೂಲದ ದಂಪತಿ ಗಾರೆ ಕೆಲಸ ಮಾಡಿಕೊಂಡು 15 ವರ್ಷಗಳಿಂದ ವಾಸವಾಗಿದ್ದಾರೆ. ತಂದೆ ತಾಯಿ ಕೆಲಸಕ್ಕೆ ಹೋಗಿದ್ದಾಗ ಬಾಲಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಶಾಲೆಗೆ ಹೋಗದೆ ಮನೆಯಲ್ಲಿ ಇದ್ದಬಾಲಕಿಯ ಮೇಲೆ ಹಂತಕರು ಹಲ್ಲೆ ಮಾಡಿದ್ದಾರೆ. ಮಧ್ಯಾಹ್ನ ಮನೆಯಲ್ಲಿ ಬಾಲಕಿ ಶವ ಪತ್ತೆಯಾಗಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು.

ಈ ಭೀಕರ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ತಾವರೆಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಬಾಲಕಿಯ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿವೆ. ದುಷ್ಕರ್ಮಿಗಳು ಅತ್ಯಾಚಾರವೆಸಗಿ ನಂತರ ಕೊಲೆ ಮಾಡಿ ಪರಾರಿಯಾಗಿರುವ ಅನುಮಾನವಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *