Breaking News

ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂದಿಸಿದ ಪೊಲೀಸ್.

ಬೆಂಗಳೂರು ದಕ್ಷಿಣ ತಾಲ್ಲೂಕಿನ ತಾವರೆಕೆರೆಯಲ್ಲಿ ಬುಧವಾರ ನಡೆದಿದ್ದ 13 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವರೆಕೆರೆ ಠಾಣೆ ಪೊಲೀಸರು ಘಟನೆ ನಡೆದ ಎಂಟೇ ತಾಸಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ರಾಯಚೂರು ಜಿಲ್ಲೆಯ 25 ವರ್ಷದ ಯಲ್ಲಪ್ಪ ಬಂಧಿತ ಯುವಕ.ಕೃತ್ಯ ಎಸಗಿ ಹೋಗುವಾಗ ಮಾರ್ಗಮಧ್ಯೆ ಪರಿಚಿತ ಯುವಕನೊಬ್ಬ ಆರೋಪಿಯ ಬೈಕ್‌ ಹತ್ತಿದ್ದ. ಅನುಮಾನದ ಮೇರೆಗೆ ಆತನನ್ನು ಸಹ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯದಲ್ಲಿ ಆತನ ಪಾತ್ರವಿಲ್ಲದಿರುವುದು ಗೊತ್ತಾಯಿತು. ಸದ್ಯ ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *